ಸೀಬರ್ಡ್ ನೌಕಾನೆಲೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿ ಹಿಡಿದ ಸಾರ್ವಜನಿಕರು

ಕಾರವಾರ: ಸೀಬರ್ಡ್ ನೌಕಾನೆಲೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯನ್ನು ವಂಚನೆಗೊಳಗಾದವರೇ ಹಿಡಿದು, ಹಣ ಮರಳಿಸುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಆರ್ಗಾದ ನಿವಾಸಿ ನಿಲೇಶ ಎಂಬಾತ ಅರಗಾದಲ್ಲಿರುವ ನೌಕಾನೆಲೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಅನೇಕ ಉದ್ಯೋಗಾಕಾಂಕ್ಷಿಗಳಿoದ ಹಣ ಪಡೆದು ವಂಚಿಸುತ್ತಿದ್ದ ಎನ್ನಲಾಗಿದೆ. ಸುಮಾರು 20ಕ್ಕೂ ಅಧಿಕ ಮಂದಿಯಿoದ ಉದ್ಯೋಗ ಕೊಡಿಸುವುದಾಗಿ 50- 60 ಸಾವಿರ ಹಣ ಪಡೆದುಕೊಂಡಿದ್ದಷ್ಟೆ ಅಲ್ಲದೆ, ಉದ್ಯೋಗ ಸಿಕ್ಕಿದೆ ಎಂದು ಹೇಳಿ ಒಂದಿಷ್ಟು ಮಂದಿಗೆ ನೌಕಾಸೇನೆಯ ಹೆಸರಿನಲ್ಲಿ ನಕಲಿ ನೇಮಕಾತಿ ಪತ್ರವನ್ನೂ ಸಹ ಈತ ನೀಡಿದ್ದ.

ಹಣ ಕೊಟ್ಟು ಅತ್ತ ಉದ್ಯೋಗವೂ ಇಲ್ಲದೆ ಇತ್ತ ಕೊಟ್ಟ ಹಣ ವಾಪಸ್ ಇಲ್ಲದೆ ಪರದಾಡುತ್ತಿದ್ದವರು, ವಂಚನೆ ಮಾಡಿದ ನಿಲೇಶನನ್ನು ನಗರಕ್ಕೆ ಕರೆಯಿಸಿಕೊಂಡು ಹುಡುಕಿ ಕರೆತಂದಿದ್ದು, ಕೊಟ್ಟಿರುವ ಹಣ ವಾಪಸ್ ನೀಡುವಂತೆ ಆತನ ಬಳಿ ಪಟ್ಟು ಹಿಡಿದಿದ್ದಾರೆ. ಕೇವಲ ಉದ್ಯೋಗ ನೀಡುವುದಾಗಿ ವಂಚನೆಯಷ್ಟೇ ಅಲ್ಲ, ಕೆಲವರಿಂದ ಕಾರನ್ನೂ ತಿಂಗಳ ಬಾಡಿಗೆಗೆ ಪಡೆದು ಬಾಡಿಗೆ ಹಣವನ್ನೂ ಸಹ ನೀಡದೆ ವಂಚನೆ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ:
ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version