ಕಾರವಾರ : ಜಿಲ್ಲೆಯಾದ್ಯಂತ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಸೋಮವಾರ ಸೋಂಕಿತರ ಸಂಖ್ಯೆ ಶತಕಕ್ಕೆ ತಲುಪಿದ ಬೆನ್ನಲ್ಲೆ ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಕಳವಳಕಾರಿ ವಿದ್ಯಮಾನ ಬೆಳಕಿಗೆ ಬಂದಿದೆ. ಸೋಮವಾರ ಒಂದೇ ದಿನ ಜಿಲ್ಲೆಯಲ್ಲಿ ಒಟ್ಟು 10 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾರವಾರದಲ್ಲಿ 4 ವಿದ್ಯಾರ್ಥಿಗಳಿಗೆ, ಅಂಕೋಲಾದಲ್ಲಿ 3 ವಿದ್ಯಾರ್ಥಿಗಳು, ಹಳಿಯಾಳ ತಾಲೂಕಿನಲ್ಲಿ 1, ಯಲ್ಲಾಪುರ ತಾಲೂಕಿನ 1 ವಿದ್ಯಾರ್ಥಿ ಹಾಗೂ ಹೊನ್ನಾವರ ತಾಲೂಕಿನ ಓರ್ವ ವಿದ್ಯಾರ್ಥಿಯಲ್ಲಿ ಸೋಂಕು ತಗುಲಿದೆ, ಒಂದೇ ದಿನದಲ್ಲಿ 10 ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿರುವುದು ಪಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಳೆದ ಒಂದೂವರೆ ತಿಂಗಳಿನಲ್ಲಿ ಜಿಲ್ಲೆಯಲ್ಲಿ 122 ಶಾಲಾ ವಿದ್ಯಾರ್ಥಿಗಳು ಈ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಕಳೆದ ಡಿಸೆಂಬರ್ 1 ರಿಂದ ಜನವರಿ 10 ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಒಟ್ಟೂ 122 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತುಗುಲಿದ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆಯಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವುದರಲ್ಲಿ ಉತ್ತಮ ಸಾಧನೆ ಮಾಡಿದ್ದು, ಜಿಲ್ಲಾವಾರು ಸಾಧನೆಯಲ್ಲಿ ರಾಜ್ಯದಲ್ಲಿ ಟಾಪ್ ಎರಡನೆಯ ಸ್ಥಾನ ಪಡೆದಿದೆ.
ವಿಸ್ಮಯ ನ್ಯೂಸ್, ಕಾರವಾರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.