ಸಾರ್ವಜನಿಕರ ಗಮನಕ್ಕೆ: ಈ ಎರಡು ದಿನ ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರದ ಪ್ರವೇಶಕ್ಕೆ ನಿರ್ಬಂಧ

ಶಿರಸಿ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಇದೀಗ ಸ್ಥಳೀಯ ಪಂಚಾಯತ್ ಕೂಡಾ ಕಠಿಣ ಕ್ರಮಕ್ಕೆ ಮುಂದಾಗಿದ್ದು, ರಾಜ್ಯದ ಪ್ರಸಿದ್ದ ಪ್ರವಾಸಿ ಹಾಗೂ ಪುಣ್ಯಕ್ಷೇತ್ರ ಸಹಸ್ರಲಿಂಗಕ್ಕೆ ಮಕರ ಸಂಕ್ರಾoತಿಗೆ ಭಕ್ತಾದಿಗಳು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿದೆ.

ಜನವರಿ 14 ಹಾಗೂ 15ರಂದು ಪ್ರತೀ ವರ್ಷ ಸಹಸ್ರಲಿಂಗಕ್ಕೆ ಅಪಾರ ಸಂಖ್ಯೆಯ ಭಕ್ತಾದಿಗಳು ರಾಜ್ಯದ ವಿವಿಧೆಡೆಯಿಂದ ಆಗಮಿಸುತ್ತಿದ್ದರು. ಆದರೆ, ಈಗ ಕೋವಿಡ್ ಸೋಂಕು ಹೆಚ್ಚಳ ಆಗುತ್ತಿರುವ ಕಾರಣದಿಂದ ಶಾಲ್ಮಲಾ ನದಿಯೊಳಗಿನ ಸಹಸ್ರಲಿಂಗಕ್ಕೆ ಭಕ್ತಾದಿಗಳ ಪ್ರವೇಶವನ್ನು ಜನವರಿ 14 ಮತ್ತು 15ರಂದು ಎರಡು ದಿನಗಳ ಕಾಲ ನಿರ್ಬಂಧಿಸಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version