Follow Us On

WhatsApp Group
Important
Trending

ಖಾಸಗಿ ಕಂಪನಿಯಲ್ಲಿ ಐವತೈದು ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದ ಮಹಿಳೆ ವಿಷ ಸೇವಿಸಿದಳು: ಚಿಕಿತ್ಸೆ ಫಲಿಸದೆ ಸಾವು

ಹೊನ್ನಾವರ: ಮಹಿಳೆಯೊಬ್ಬಳು ಮನನೊಂದು ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತಾಲೂಕಿನ ಟೊಂಕಾದಲ್ಲಿ ನಡೆದಿದೆ. ರಾಧಾ ಚಂದ್ರ ತಾಂಡೇಲ್ ಸಾವಿಗೆ ಶರಣಾದ ಮಹಿಳೆ ಎಂದು ತಿಳಿದುಬಂದಿದೆ. ಈಕೆ ಖಾಸಗಿ ಕಂಪನಿಯಲ್ಲಿ ಐವತೈದು ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದರು. ಕಂಪೆನಿಯವರು ಇವರಿಗೆ 18,50,000 ರೂಪಾಯಿ ಚೆಕ್ ನೀಡದ್ದಾರೆ ಎನ್ನಲಾಗಿದೆ. ಕೊಟ್ಟಿರುವ ಚೆಕ್ ಕೂಡ ಬೌನ್ಸ್ ಆಗಿದ್ದು ಇದೆ ವಿಷಯ ಮನಸ್ಸಿಗೆ ಹಚ್ಚಿಕೊಂಡು ಬೆಳಗಿನ ಜಾವ ತನ್ನ ಮನೆಯಲ್ಲಿವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು.

ಕೂಡಲೇ ಮನೆಯವರು ತಾಲೂಕಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button