Join Our

WhatsApp Group
Important
Trending

ಅತಿವೇಗದಿಂದ ಬಂದ ಕಾರು : ಲಾರಿ ತಪ್ಪಿಸಲು ಹೋಗಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ

ಅಂಕೋಲಾ : ಅತಿ ವೇಗದಲ್ಲಿ ಕಾರು ಚಲಾಯಿಸಿ ಬಂದು ಎದುರುಗಡೆ ಬರುತ್ತಿರುವ ಲಾರಿ ತಪ್ಪಿಸಲು ಹೋಗಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಅಂಕೋಲಾ ತಾಲೂಕಿನ ಹೆಬ್ಬುಳ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದೆ.ಈ ಕುರಿತಂತೆ ಕಾರು ಚಾಲಕ ಆಂದ್ರ ಪ್ರದೇಶದ ಶಕ್ತಿನಗರ ನಿವಾಸಿ ಶೇಖ್ ನೂರ್ ಅಹ್ಮದ್ (44) ಎಂಬಾತನ ಮೇಲೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

ಆರೋಪಿತನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ಕಾರು ನಂ ಎ.ಪಿ 21 ಎ ಎಕ್ಸ್ 7449 ಅತಿ ವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಯಾವುದೋ ವಾಹನವನ್ನು ಓವರ್ ಟೇಕ್ ಮಾಡಿ ಎದುರಿಗೆ ಬಂದ ಲಾರಿಯನ್ನು ತಪ್ಪಿಸುವ ಯತ್ನದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಾನಿ ಪಡಿಸಿದ ಕುರಿತು  ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ರವಿಪ್ರಕಾಶ್ ನಾಗೇಶ್ವರ ರಾವ  ಬಿ.ಕೆ, (ಪುರೋಹಿತ – ಬ್ರಾಹ್ಮಣ ) ಎನ್ನುವವರು ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡ ಅಂಕೋಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರಾಹೆ 63 ರ ಯಲ್ಲಾಪುರ – ಅಂಕೋಲಾ ಮಧ್ಯೆ ಮುಖ್ಯ ರಸ್ತೆಯಲ್ಲಿ ನಿರ್ವಹಣೆ ಕೊರತೆಯಿಂದ ಹಲವೆಡೆ ಡಾಂಬರ  ಹೊದಿಕೆ ಸಂಪೂರ್ಣ ಕಿತ್ತು ಹೋಗಿದೆ . ಇನ್ನು ಕೆಲವೆಡೆ ರಸ್ತೆಯಲ್ಲಿಯೇ ಗುಂಡಿ – ತಗ್ಗುಗಳಾಗಿದ್ದು ಸುಗಮ  ಸಂಚಾರ ವ್ಯವಸ್ಥೆಗೆ ತೀವೃ ತೊಂದರೆಯಾಗುತ್ತಿದ್ದು ಸಂಬಧಿಸಿದ ಇಲಾಖೆ ತುರ್ತು ಕ್ರಮ ಕೈಗೊಂಡು ಹೆದ್ದಾರಿ ದುರಸ್ತಿಗೆ ಮುಂದಾಗಬೇಕಿದೆ.             

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button