Follow Us On

WhatsApp Group
Big News
Trending

ಕೋವಿಡ್ ಹೆಚ್ಚಳ: ಮತ್ತಷ್ಟು ಹೊಸ ನಿಯಮ ಜಾರಿ: ಜಿಲ್ಲಾಧಿಕಾರಿಗಳ ಹೇಳಿದ್ದೇನು ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಐದಕ್ಕಿಂತ ಹೆಚ್ಚು ಕೋವಿಡ್ ಪ್ರಕರಣ ದಾಖಲಾದ ಶಾಲೆಗಳನ್ನ ಮಾತ್ರ ಒಂದು ವಾರಗಳ ಕಾಲ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳನ್ನ ಬಂದ್ ಮಾಡುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಮಾಡಿದ ಹಿನ್ನಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಜಿಲ್ಲಾಧಿಕಾರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸೋಂಕಿನ ಪ್ರಕಣ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿಲ್ಲ. ಈ ಹಿನ್ನಲೆಯಲ್ಲಿ ಎಲ್ಲಾ ಶಾಲಾ ಕಾಲೇಜು ಬಂದ್ ಮಾಡಲು ಅನಿವಾರ್ಯ ಎದುರಾಗಿಲ್ಲ. ಆದರೆ ಐದಕ್ಕಿಂತ ಹೆಚ್ಚಿನ ಪ್ರಕರಣ ಯಾವ ಶಾಲೆಯಲ್ಲಿ ಕಂಡು ಬರುವುದೋ ಅದನ್ನ ಕ್ಲಸ್ಟರನ್ನಾಗಿ ಮಾಡಿ ವಾರಗಳ ಕಾಲ ಬಂದ್ ಮಾಡಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಅಂಗನವಾಡಿಗಳಲ್ಲಿ ಕಾರ್ಯಕರ್ತರಿಗೆ ಶಿಕ್ಷಕರಿಗೆ ಯಾರಿಗೆ ಪಾಸಿಟಿವ್ ಬಂದರು ಆಯಾ ಅಂಗನವಾಡಿ ಬಂದ್ ಮಾಡಲಾಗುವುದು. ಅಲ್ಲದೇ ಮಕ್ಕಳಲ್ಲಿ ಪಾಸಿಟಿವ್ ಬಂದರು ಬಂದ್ ಮಾಡಲಾಗುವುದು. ಅಂಗನವಾಡಿಯಲ್ಲಿ ಕೆಲಸ ಮಾಡುವವರಿಗೆ ಪ್ರತಿ ಹದಿನೈದು ದಿನಳಿಗೊಮ್ಮೆ ಸ್ಯಾಂಪಲ್ ಸಂಗ್ರಹಿಸಲಾಗುವುದು ಎಂದರು.
ವಿದ್ಯಾರ್ಥಿಗಳಲ್ಲಿ ಸೋಂಕು ಹರಡುವುದನ್ನ ತಡೆಯಲು ನೋಡೆಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಪ್ರತಿನಿತ್ಯ ಎಷ್ಟು ಪಾಸಿಟಿವ್ ಪ್ರಕರಣ ದಾಖಲಾಗಿದೆ.ವಿದ್ಯಾರ್ಥಿಗಳಲ್ಲಿ ಸೋಂಕು ಹರಡುವುದನ್ನ ತಡೆಯಲು ನೋಡೆಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಪ್ರತಿನಿತ್ಯ ಎಷ್ಟು ಪಾಸಿಟಿವ್ ಪ್ರಕರಣ ದಾಖಲಾಗಿದೆ.ಎಷ್ಟು ಸ್ಯಾಂಪಲ್ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ನೋಡೆಲ್ ಅಧಿಕಾರಿಗಳು ವರದಿಯನ್ನ ನೀಡಲಿದ್ದು ವರದಿಯನ್ವಯ ಕ್ಲಸ್ಟರ್ ಪ್ರಕಾರ ಬಂದ್ ಮಾಡುವ ಕ್ರಮ ಕೈಗೊಳ್ಳಲಾಗುವುದು. ಶಾಲಾ ಕಾಲೇಜಿನ ಶಿಕ್ಷಕರು, ಉಪನ್ಯಾಸಕರು, ಜೊತೆಗೆ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಅನವಶ್ಯಕವಾಗಿ ದೂರದ ಊರುಗಳಿಗೆ ಪ್ರಯಾಣ ಸದ್ಯದ ಮಟ್ಟಿಗೆ ಮಾಡಬಾರದು. ಒಂದೊಮ್ಮೆ ಹೋಗುವುದಾದರೆ ಆಯಾ ಶಾಲಾ ಕಾಲೇಜಿನ ಮುಖ್ಯಸ್ಥರ ಅನುಮತಿ ಪಡೆದು ಹೋಗಬೇಕು. ವಾಪಾಸ್ ಬಂದ ನಂತರ ಕ್ವಾರಂಟೈನ್ ಆಗಿ ಸೋಂಕಿನ ಲಕ್ಷಣ ಕಂಡು ಬಂದರೆ ಟೆಸ್ಟ್ ಮಾಡಿಸಿಕೊಂಡು ಮುಂಜಾಗ್ರತೆ ವಹಿಸಬೇಕು ಎಂದರು.

ಇದೇ ವೇಳೆ, ಜಿಲ್ಲಾಧಿಕಾರಿಗಳು ಸದ್ಯ ಕಾರವಾರ ನಗರದ ಬಾಲಮಂದಿರ ಹಾಗೂ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಕರ್ನಾಟಕ ಪಬ್ಲಿಕ್ ಶಾಲೆಗಳನ್ನ ಒಂದು ವಾರಗಳ ಕಾಲ ಬಂದ ಮಾಡಲಾಗಿದೆ ಎಂದಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button