ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಧರಿಸಿದ್ದ ಲುಂಗಿಯನ್ನೇ ಬಳಸಿಕೊಂಡು ಸಾವಿಗೆ ಶರಣು

ಭಟ್ಕಳ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ ಗೋಳಿಬೀಳೂರಿನಲ್ಲಿ ನಡೆದಿದೆ. ಧರಿಸಿದ್ದ ಲುಂಗಿಯನ್ನೇ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ. ಮೃತನನ್ನು ಸೋಮಯ್ಯನಾರಾಯಣ ನಾಯ್ಕ ಕೊಲ್ಲೂರಿಮನೆ ( 63 ವರ್ಷ ) ಎಂದು ಗುರುತಿಸಲಾಗಿದೆ.

ಹೊಳೆಗೆ ಹೋದ ಸೋಮಯ್ಯ ವಾಪಸ್ಸು ಬಾರದೇ ಇದ್ದಾಗ ಮನೆಯವರು ಹುಡುಕಲು ಆರಂಭಿಸಿದರು, ಈ ವೇಳೆ ಕುಟುಂಬದ ಸದಸ್ಯನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿದ್ದ ಶವವನ್ನು ಕಂಡು ಉಳಿದವರಿಗೆ ಮಾಹಿತಿ ನೀಡಿದ್ದಾರೆ. ಮೃತರು ಹೆಂಡತಿ ಹಾಗೂ ನಾಲ್ಕು ಗಂಡು ಮಕ್ಕಳನ್ನು ಅಗಲಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version