ಕುಮಟಾ: ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಕ್ರಮಕ್ಕೆ ಮುಂದಾಗಿದೆ. ಈಗ ಹಬ್ಬ-ಜಾತ್ರೆ ಪ್ರಾರಂಭವಾಗುತ್ತಿದ್ದು, ಈ ವೇಳೆ ಕೋವಿಡ್ ಹೆಚ್ಚುವ ಭೀತಿಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ನಿಮಿತ್ತ 18-1-2022ರಂದು ನಡೆಯಲಿರುವ ಧಾರೇಶ್ವರ ಶ್ರೀ ಧಾರಾನಾಥ ಸ್ವಾಮಿಯ ರಥೋತ್ಸವ ಸರಳವಾಗಿ ನಡೆಯಲಿದೆ. ತಾಂತ್ರಿಕರ ,ಅರ್ಚಕರ ,ಸಿಬ್ಬಂದಿ ಹಾಗೂ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಸರಳವಾಗಿ ನೇರವೇರಲಿದೆ. ಭಕ್ತಾದಿಗಳು ಸಹಕರಿಸಬೇಕಾಗಿ ಆಡಳಿತ ಮಂಡಳಿ ಹಾಗೂ ಮೊಕ್ತೇಸರರು ವಿನಂತಿಸಿದ್ದಾರೆ.
ಇದೇ ವೇಳೆ, 29-01-2022 ರಂದು ಹೆಗಡೆಯ ಶ್ರೀ ಶಾಂತಿಕಾoಬಾ ಪರಮೇಶ್ವರಿ ದೇವಿಯ ಜಾತ್ರಾ ಮಹೋತ್ಸವ ನಡೆಸುವುದಕ್ಕೆ ಬೇಕಾಗಿ ಜನವರಿ 10ರಿಂದ ಜಾತ್ರಾ ವಿಧಿ ವಿಧಾನಗಳು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜಾತ್ರಾ ಮಹೋತ್ಸವ ವೈರಸ್ ಹರಡುವಿಕೆಗೆ ಕಾರಣ ಆಗಬಾರದು ಎನ್ನುವ ಉದ್ದೇಶದಿಂದ ಜಾತ್ರೆಯನ್ನು ಮುಂದೂಡಲಾಗಿದೆ.
ವಿಸ್ಮಯ ನ್ಯೂಸ್, ಕುಮಟಾ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ