ಈಜಲು ತೆರಳಿದ ವೇಳೆ ದುರಂತ: ಇಬ್ಬರು ವಿದ್ಯಾರ್ಥಿಗಳ ಸಾವು

ಹೊನ್ನಾವರ: ಇಲ್ಲಿನ ಅರಬ್ಬಿ ಸಮುದ್ರದಲ್ಲಿ ವಿದ್ಯಾರ್ಥಿಗಳು ಈಜಾಡಲು ತೆರಳಿದ ವೇಳೆ ದುರಂತ ಸಂಭವಿಸಿದೆ. ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಮಂಕಿ ತಾಳಮಕ್ಕಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಾದ ದರ್ಶನ ಉದಯ ನಾಯ್ಕ ಮತ್ತು ದಪಡ್ಡಗುಂದದ ಮನೋಜ ನಾಯ್ಕ ಮೃತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಈ ಇಬ್ಬರು ಕಡಲತೀರಕ್ಕೆ ಈಜಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯರು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಮಕ್ಕಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮನೆಯಲ್ಲಿ ಆಕ್ರಂದನ ಮುಗಿಲುಮುಟ್ಟಿದ್ದು, ಸ್ಮಶಾನ ಮೌನ ಆವರಿಸಿದೆ

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version