ಶಿರಸಿಯಲ್ಲಿ ಕೋವಿಡ್ ಸೋಂಕು ಹೆಚ್ಚಳ: 15ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪಾಸಿಟಿವ್

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಿರಸಿಯಲ್ಲೂ ಸೋಂಕು ಉಲ್ಬಣಿಸಿದೆ. ಇಲ್ಲಿನ ನಗರದ ಕಾಲೇಜು ರಸ್ತೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಕೋವಿಡ್ ಸೋಂಕು ಒಂದೇ ಸಮನೆ ಏರಿಕೆ ಕಂಡಿದೆ.  ಸುಮಾರು 15 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢವಾಗಿರುವುದು ಪಾಲಕರ ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನಲೆಯಲ್ಲಿ ಜನವರಿ 19 ರ ವರೆಗೆ ಕಾಲೇಜನ್ನು ಬಂದ್ ಮಾಡಲು ಸ್ಥಳೀಯ ಆಡಳಿತ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಪಾಲಕರು ಹೆಚ್ಚಿನ ಕಾಳಜಿ ವಹಿಸುವ ಅಗತ್ಯತೆ ಇದೆ.
ವಿಸ್ಮಯ ನ್ಯೂಸ್, ಶಿರಸಿ

Exit mobile version