ಕಾರವಾರದಲ್ಲಿ ಅತಿಹೆಚ್ಚು ಪಾಸಿಟಿವಿಟಿ ರೇಟ್: ಜಿಲ್ಲಾಧಿಕಾರಿಗಳು ಹೇಳಿದ್ದೇನು ನೋಡಿ?

ಕಾರವಾರ: ಕಾರವಾರದಲ್ಲಿ ಪಾಸಿಟಿವಿಟಿ ರೇಟ್ ಶೇಕಡಾ 14 ಇದ್ದು ಜಿಲ್ಲೆಯಲ್ಲಿ ಅತಿಹೆಚ್ಚು ಪಾಸಿಟಿವಿಟಿ ರೇಟ್ ದಾಖಲಾಗುತ್ತಿದೆ. ಉಳಿದಂತೆ ಹೊನ್ನಾವರದಲ್ಲಿ ಶೇಕಡಾ 5.5 ಪಾಸಿಟಿವಿಟಿ ರೇಟ್ ಇದ್ದರೇ, ಕುಮಟಾದಲ್ಲಿ 5.3 ಪಾಸಿಟಿವಿಟಿ ರೇಟ್ ಇದೆ. ಇನ್ನುಳಿದ ಎಲ್ಲಾ ತಾಲೂಕಿನ ಪಾಸಿಟಿವಿಟಿ ದರ ಶೇಕಡಾ 5ಕ್ಕಿಂತ ಕಡಿಮೆ ದಾಖಲಾಗುತ್ತಿರುವುದು ಸಮಾಧಾನದ ವಿಷಯ.

ಕೋವಿಡ್ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದ್ದು, ಮುಂದಿನ ಎರಡು ವಾರಗಳ ಕಾಲ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿ ಗಳನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‌ಗೆ ಕಡಿವಾಣ ಹಾಕಲು ಮಾಸ್ಕ್ ಕಡ್ಡಾಯವಾಗಿ ದರಿಸುವುದು, ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಒಂದೇ ಸದ್ಯಕ್ಕೆ ಇರುವ ದಾರಿ. ಜನರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಯನ್ನ ಪಾಲಿಸಿದರೆ ಹೆಚ್ಚುತ್ತಿರುವ ಸೋಂಕನ್ನ ತಡೆಗಟ್ಟಲು ಸಹಕಾರಿಯಾಗಲಿದ್ದು ಜಿಲ್ಲೆಯ ಜನರು ಇದಕ್ಕೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version