ಆಸ್ಪತ್ರೆಗೆ ಕರೆತರುತ್ತಿದ್ದಾಗ 108 ಆ್ಯಂಬುಲೆನ್ಸ್ ನಲ್ಲೇ ಹೆರಿಗೆ: ಅವಳಿ ಮಕ್ಕಳ ಜನನ

ಯಲ್ಲಾಪುರ: ಮಹಿಳೆಯೊಬ್ಬರನ್ನು ಹೆರಿಗೆಗೆಂದು ತಾಲೂಕಾ ಆಸ್ಪತ್ರೆಗೆ 108 ಅಂಬ್ಯುಲೆನ್ಸ್ ನಲ್ಲಿ ಕರೆ ತರುತ್ತಿರುವಾಗ ಹೆರಿಗೆ ನೋವು ಹೆಚ್ಚಾಗಿ ಅಂಬ್ಯುಲೆನ್ಸ್ ನಲ್ಲಿ ಮಹಿಳೆಯು ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ತಾಲೂಕಿನ ಕರಡೊಳ್ಳಿಯಲ್ಲಿ ನಡೆದಿದೆ. 108 ವಾಹನದ ತುರ್ತು ವೈದ್ಯಕೀಯ ತಂತ್ರಜ್ಞ ಶಿವಕುಮಾರ್ ಇಟಗಿ, ಚಾಲಕ ಅನೀಲ್ ನಾಯ್ಕ ಅವರು ಮಹಿಳೆಯ ತಾಯಿಯ ಸಹಕಾರದಿಂದ ಹೆರಿಗೆ ಮಾಡಿಸಿದ್ದಾರೆ.

ತಾಲೂಕಿನ ಕರಡೊಳ್ಳಿಯ 30 ವರ್ಷ ವಯಸ್ಸಿನ ಮಹಿಳೆಯೊಬ್ಬರನ್ನು ಹೆರಿಗೆಗೆಂದು ಅಂಬ್ಯುಲೆನ್ಸ್ ನಲ್ಲಿ ತರುತ್ತಿರುವಾಗ ಒಂದು ಹೆಣ್ಣು, ಒಂದು ಗಂಡು ಅವಳಿ ಮಕ್ಕಳ ಜನನವಾಗಿದೆ. 10 ನಿಮಿಷಗಳ ಅಂತರದಲ್ಲಿ ಜನಿಸಿದ ಈ ಅವಳಿ ಶಿಶುಗಳ ತೂಕ ಕಡಿಮೆ ಇದ್ದ ಕಾರಣ ಹೆಚ್ಚಿನ ಚಿಕಿತ್ಸೆಗೆಂದು ತಾಯಿ,ಮಕ್ಕಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ. ಅಂಬುಲೆನ್ಸ್ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version