Important
Trending

ಜಲಪಾತದಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳಲ್ಲಿ ಓರ್ವ ನೀರುಪಾಲು: ಕಾಲುಜಾರಿ ಬಿದ್ದು ಅವಾಂತರ

ಶಿರಸಿ: ಜಲಪಾತದಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳಲ್ಲಿ ಓರ್ವ ನೀರುಪಾಲಾದ ಘಟನೆ ತಾಲೂಕಿನ ಜಡ್ಡಿಗದ್ದೆ ಸಮೀಪದ ಶಿವಗಂಗಾ ಫಾಲ್ಸ್ ನಲ್ಲಿ ನಡೆದಿದೆ. ವಿಕಾಸಾಶ್ರಮದ ಸುಬ್ರಹ್ಮಣ್ಯ ಹೆಗಡೆ (18) ನೀರು ಪಾಲಾದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈಜಲು ಹೋದ ವೇಳೆ ಸುಬ್ರಹ್ಮಣ್ಯ ಕಾಲುಜಾರಿ ಬಿದ್ದು ತೇಲಿಹೋಗಿದ್ದಾನೆ. ಈವರೆಗೂ ಈತನ ಶವ ಪತ್ತೆಯಾಗಿಲ್ಲ.

ವಿದ್ಯಾರ್ಥಿ ಶವಕ್ಕಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿoದ ಹುಡುಕಾಟ ಮುಂದುವರಿದಿದೆ. ಕಲ್ಲುಬಂಡೆಯ ನಡುವೆ ಫೋಟೋ ತೆಗೆಯುತ್ತಿರುವಾಗ ಕಾಲುಜಾರಿ ಬಿದ್ದಿರುವುದಾಗಿ ವರದಿಯಾಗಿದೆ. ವಿದ್ಯಾರ್ಥಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸಿಪಿಐ ರಾಮಚಂದ್ರ ನಾಯಕ್ ಹಾಗೂ ಪಿಎಸ್‌ಐ ಈರಯ್ಯ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button