ಜಿಲ್ಲೆಯಲ್ಲಿ 25 ಶಾಲೆಗಳು ಬಂದ್: 25 ಶಿಕ್ಷಕರು, 14 ವೈದ್ಯರಿಗೆ ಪಾಸಿಟಿವ್

ಕಾರವಾರ: ಜಿಲ್ಲೆಯ ದಾಂಡೇಲಿಯ ಎಸ್‌ಎಚ್ ಸೂರಗಾವಿ ಇಂಟರ್ ನ್ಯಾಷನಲ್ ಸ್ಕೂಲ್, ಬಿಸಿ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಆಡಿಟ್ ನಂ.2 ಮತ್ತು ಜನತಾ ವಿದ್ಯಾಲಯ ಪ್ರೌಢಶಾಲೆ, ಯಲ್ಲಾಪುರದ ಮದರ ಥೆರಸಾ ಪ್ರೌಢಶಾಲೆ, ಶಿರಸಿಯ ಮಾರಿಕಾಂಬಾ ಪ್ರೌಢ ಶಾಲೆ, ಇಡಗುಂಜಿಯ ಸರ್ಕಾರಿ ಪ್ರೌಢಶಾಲೆ, ಹೊನ್ನಾವರದ ಹೋಲಿ ರೋಸರಿ ಕಾನ್ವೆಂಟ್, ಹೊನ್ನೆ ಶಿರೂರನ ಸರ್ಕಾರಿ ಪ್ರೌಢಶಾಲೆ, ಕುಮಟಾ ತಾಲೂಕಿನ ಸಂತೆಗುಳಿ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕಿನ ಪ್ರಕರಣಗಳು ಕಂಡುಬoದಿದೆ.

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜನವರಿ 25ರ ವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಶಾಲೆಯಲ್ಲಿ ಶಿಕ್ಷಕರಿಗೆ ಮತ್ತು ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡ ವೈದ್ಯರಿಗೂ ಸೋಂಕು ತಗುಲುವ ಪ್ರಕರಣ ಹೆಚ್ಚುತ್ತಿದೆ. 25 ಶಿಕ್ಷಕರು, 14 ವೈದ್ಯರಿಗೆ ಪಾಸಿಟಿವ್ ಬಂದಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version