ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ: ಸ್ವಲ್ಪದರಲ್ಲೇ ತಪ್ಪಿತು ಸಂಭಾವ್ಯ ಅನಾಹುತ

ಯಲ್ಲಾಪುರ: ಇಲ್ಲಿನ ನಾಯಕನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸರಕು ತುಂಬಿಕೊoಡು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ ನಾಯಕನಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ, ಪಕ್ಕದಲ್ಲೇ ಇದ್ದ ರಕ್ಷಣಾ ಬೇಲಿಗೆ ಹೊಡೆದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಲಾರಿಯ ಮುಂಭಾಗ ಜಖಂಗೊoಡಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅಪಘಾತ ಸಂಭವಿಸುತ್ತಿದ್ದoತೆ ಸ್ಥಳೀಯರು ಹೆಸ್ಕಾಂಗೆ ಮಾಹಿತಿ ನೀಡಿ, ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version