ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿ: ಸ್ವಲ್ಪ ಸಮಯದ ಬಳಿಕ ಕರ್ತವ್ಯದಲ್ಲಿದ್ದ ಎ.ಎಸ್.ಐ ಹೃದಯಾಘಾತದಿಂದ ಸಾವು

ಕಾರವಾರ: ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕರ್ತವ್ಯದಲ್ಲಿ ಇದ್ದ ಸಂಚಾರಿ ಪೋಲಿಸ್ ಠಾಣೆ ಎ.ಎಸ್.ಐ ಹೃದಯಾಘಾತದಿಂದ ಸಾವು ಕಂಡ ಘಟನೆ ನಗರದಲ್ಲಿ ನಡೆದಿದೆ. ಹೌದು, ಸಂಚಾರಿ ಠಾಣೆಯಲ್ಲಿ ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎ.ಎಸ್.ಐ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಹಮ್ಮದ್ ಶೇಖ್ (57) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಇವರು 1992 ರಲ್ಲಿ ಪೊಲೀಸ್ ಕಾನಸ್ಟೇಬಲ್ ಹುದ್ದೆ ಮೂಲಕ ಪೊಲೀಸ್ ಇಲಾಖೆಯಲ್ಲಿ ಭರ್ತಿಯಾಗಿದ್ದರು.

ಅಲ್ಲದೆ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ, ಕುಮಟಾ , ದಾಂಡೇಲಿ ನಗರ,ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2019 ರಲ್ಲಿ ಪದೋನ್ನತಿ ಪಡೆದು ಎಎಸ್ ಐ ಆಗಿ ಕಾರವಾರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು. ಮೃತರ ಅಗಲಿಕೆಗೆ ಎಸ್. ಪಿ ಸುಮನಾ ಡಿ ಪೆನ್ನೆಕರ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version