ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು, ಬಿಎಸ್‌ವೈ ಅವರ ಮೊಮ್ಮಗಳು ಅಂದರೆ ಪದ್ಮಾವತಿ ಅವರ ಪುತ್ರಿ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಬಿಎಸ್ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಮೌಂಟ್ ಕಾರ್ಮೆಲ್ ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆ ಆಗಿರುವ ಸೌಂದರ್ಯ ಕಳೆದ ವರ್ಷ ಮದುವೆಯಾಗಿದ್ದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್