ಮಾಸ್ಕ್ ಧರಿಸದೆ ಓಡಾಟ & ಕಾಯ್ದೆ ಉಲ್ಲಂಘನೆ: ಒಂದೇ ದಿನ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ

ಶಿರಸಿ: ಮೋಟಾರು ವಾಹನ ಕಾಯಿದೆ ಉಲ್ಲಂಘಿಸಿದ ವಾಹನ ಚಾಲಕರಿಗೆ ಮತ್ತು ಮಾಸ್ಕ ಧರಿಸದೇ ಓಡಾಡುವ ಸಾರ್ವಜನಿಕರಿಗೆ ಶಿರಸಿ ಉಪವಿಭಾಗದ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೆಲ್ಮೆಟ್ ಕಡ್ಡಾಯ ಸೇರಿದಂತೆ ವಿವಿಧ ಮೋಟಾರು ವಾಹನ ನಿಯಮ ಉಲ್ಲಂಘಿಸಿದ ಒಟ್ಟು 194 ಪ್ರಕರಣ ದಾಖಲಿಸಲಾಗಿದ್ದು, 1.04 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಹೌದು, ನಿಯಮ ಪಾಲನೆ ಮಾಡದವರಿಂದ ಒಂದೇ ದಿನದಲ್ಲಿ 1.16 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿರಸಿ ಉಪವಿಭಾಗದ ಡಿಎಸ್ಪಿ, ಸಿಪಿಐ ಕಚೇರಿಗಳು ಸೇರಿ ಒಟ್ಟು 11 ಪೊಲೀಸ್ ಠಾಣೆಯಿಂದ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿದವರಿಗೆ ದಂಡ ವಿಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ನಗರದಲ್ಲಿ ಮಾಸ್ಕ್ ಧರಿಸಿದೇ ಓಡಾಡುವ ಜನರಿಗೆ ಜಾಗೃತಿ ಮೂಡಿಸಿ ದಂಡದ ಬಿಸಿ ಮುಟ್ಟಿಸಿದ್ದು, 11 ವಿಭಾಗದಿಂದ 120 ಪ್ರಕರಣ ದಾಖಲಿಸಿ, 12 ಸಾವಿರ ದಂಡ ವಸೂಲಿ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version