ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟು ಪ್ರೇಮನಿವೇದನೆ ಮಾಡಿದ ವಿದ್ಯಾರ್ಥಿ: ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ
ಹೊನ್ನಾವರ: ಇಲ್ಲಿನ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದಾನೆ. ಕೂಡಲೇ ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕಿ ಈ ಘಟನೆ ವಿವರಿಸಿದ್ದಾಳೆ. ಲವ್ ಲೆಟರ್ ನೋಡಿ ಸಿಟ್ಟಾದ ಶಿಕ್ಷಕಿ, ವಿದ್ಯಾರ್ಥಿಯನ್ನು ಕರೆಯಿಸಿ ಕೋಪದಿಂದ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎನ್ನಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯ ಹೊಡೆತಕ್ಕೆ ಬಾಲಕನ ಬೆನ್ನುಗಳಲ್ಲಿ ಬಾಸುಂಡೆ ಎದ್ದಿದೆ. ಬಾಲಕ ಮನೆಗೆ ತೆರಳಿದಾಗ ಷೋಷಕರು ನೋಡಿದ್ದು, ಬೆನ್ನು ಕೆಂಪಾಗಿತ್ತು. ತಕ್ಷಣ ಪೋಷಕರು ಶಿಕ್ಷಕಿಯನ್ನು ತರಾಟೆ ತೆಗೆದುಕೊಂಡಿದ್ದಾಳೆ. ವಿಷಯದ ಕುರಿತು ಶಿಕ್ಷಕಿ ಪೋಷಕರಲ್ಲಿ ಕ್ಷಮೆ ಕೇಳಿದ್ದು, ಪ್ರಕರಣ ಇತ್ಯರ್ಥಗೊಂಡಿದೆ.
ಪ್ರೀತಿ, ಪ್ರೇಮ, ಪ್ರಣಯದ ಹೆಸರಿನಲ್ಲಿ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದು, ಪೋಷಕರು ತಿದ್ದಿ ಬುದ್ದಿ ಹೇಳಬೇಕಾದ ಅನಿವಾರ್ಯತೆ ಇದೆ. ಅಲ್ಲದೆ, ಶಿಕ್ಷಕ-ಶಿಕ್ಷಕಿಯರು ಮಕ್ಕಳಿಗೆ ತಪ್ಪಿನ ಅರಿವು ಮೂಡಿಸುವ ಕೆಲಸಮಾಡಬೇಕಿದೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ