ನರೇಗಾಯೋಜನಾಬದ್ದ ಕಾಯ್ದೆ : ಪ್ರಿಯಾಂಗಾ. ನರೇಗಾ ದಿನಾಚರಣೆ ಉದ್ಘಾಟಿಸಿದ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ಅಂಕೋಲಾ: ಜಿಲ್ಲಾ ಪಂಚಾಯತಿ ಉತ್ತರ ಕನ್ನಡ, ತಾಲೂಕು ಪಂಚಾಯಿತಿ ಅಂಕೋಲಾ ಮತ್ತು ಗ್ರಾಮ ಪಂಚಾಯಿತಿ ಹಟ್ಟಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನರೇಗಾ ದಿನಾಚರಣೆ ಕಾರ್ಯಕ್ರಮ ಸಕಲಬೇಣ ನೂತನ ಕೆರೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗ ಪ್ರಿಯಾಂಗಾ ಎಂ ಅವರು ಉದ್ಘಾಟಿಸಿ ನೂರು ದಿನ ಕಾಮಗಾರಿಯಲ್ಲಿ ಪಾಲ್ಗೊಂಡ ಕೂಲಿಕಾರರ ಕುಟುಂಬದವರಿಗೆ ಪ್ರಶಂಸನಾ ಪತ್ರ, ಕಿರುಕಾಣಿಕೆ ಮತ್ತು ಕೆಲಸದ ಬುಟ್ಟಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನರೇಗಾ ಎನ್ನುವುದು ಯೋಜನಾಬದ್ಧ ಕಾಯ್ದೆಯಾಗಿದೆ, ಈ ಕಾಯ್ದೆಯಲ್ಲಿ ಪ್ರತಿಯೊಬ್ಬರ ಹಕ್ಕುಗಳನ್ನು, ಜವಾಬ್ದಾರಿಗಳನ್ನು ಸ್ಪಷ್ಟವಾಗಿ ತಿಳಿಸಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಾತ್ಮಾ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ದಿ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿ ಪಿ.ವೈ.ಸಾವಂತ್, ಹಟ್ಟಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಶಾ ನಾಯ್, ಇತರೆ ಜನಪ್ರತಿನಿಧಿಗಳು,ಅಧಿಕಾರಿ ಹಾಗೂ ಸಿಬ್ಬಂದಿ ಗಳು, ಜಿಲ್ಲಾ ಪಂಚಾಯಿತಿ ಉಪ ನಿರ್ದೇಶಕರು, ನರೇಗಾ ಯೋಜನಾ ಅಧಿಕಾರಿಗಳು , ಗ್ರಾಪಂ ವ್ಯಾಪ್ತಿಯ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ