ಉಳವಿ ಚನ್ನಬಸವೇಶ್ವರ ಜಾತ್ರೆ ರದ್ದು: ಸರಳವಾಗಿ ಸಾಂಕೇತಿಕವಾಗಿ ಆಚರಣೆ

ಕಾರವಾರ:ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗ ಸೂಚಿಯಂತೆ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೋಯಿಡಾ ತಾಲ್ಲೂಕಿನ ಉಳವಿ ಚನ್ನಬಸವೇಶ್ವರ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಉಳವಿ ಚನ್ನಬಸವೇಶ್ವರ ಟ್ರಸ್ಟ್ ತಿಳಿಸಿದೆ. ಈ ಕುರಿತು ಟ್ರಸ್ಟ್ ಪತ್ರಿಕಾ ಪ್ರಕಟಣೆ ನೀಡಿದ್ದು, ಈಗಾಗಲೇ ರಾಜ್ಯ ಸರ್ಕಾರವು, ಜಾತ್ರಾ ಮಹೋತ್ಸವಗಳನ್ನು ಹೊರತುಪಡಿಸಿ ಕೋವಿಡ್- 19ರ ಮಾರ್ಗಸೂಚಿಗಳನ್ನು ಸಡಿಲಿಕೆ ಮಾಡಿದೆ.

ಜಾತ್ರಾ ಮಹೋತ್ಸವವು ಸರಳ, ಸಾಂಕೇತಿಕ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಮಾಡಲು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಅಕವಾಶ ನೀಡಿರುತ್ತದೆ. ಸಾರ್ವಜನಿಕರ ಹಾಗೂ ಭಕ್ತಾದಿಗಳ ಆರೋಗ್ಯ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ತೆಗೆದುಕೊಳ್ಳುವ ನಿರ್ಧಾರಕ್ಕೆ ಚನ್ನಬಸವೇಶ್ವರ ಟ್ರಸ್ಟ್ ಕಮೀಟಿಯ ಸಹಕಾರವಿದೆ ಎಂದು ಸಮಿತಿ ಹೇಳಿದೆ.

ವಿಸ್ಮಯ ನ್ಯೂಸ್, ಜೋಯ್ಡಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version