Important
Trending

ಅವಿವಾಹಿತೆಯೊರ್ವಳು ಜನ್ಮನೀಡಿದ ನವಜಾತ ಗಂಡು ಶಿಶು ಮಾರಾಟಕ್ಕೆ ಯತ್ನ: ಆಸ್ಪತ್ರೆಯ ನರ್ಸ್ ಪ್ರೇರಣೆ?

ಹೊನ್ನಾವರ: ಕೆಲವು ದಿನದ ಹಿಂದೆ ತಾಲೂಕಿನ ಆಶಾ ಕಾರ್ಯಕರ್ತೆಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಅವಿವಾಹಿತೆಯೋರ್ವಳು ಜನ್ಮನೀಡಿದ ಶಿಶುವನ್ನು ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ನರ್ಸ್ ಸಹಾಯದಿಂದ ಮಾರಾಟ ಮಾಡಿದ್ದಾರೆ ಎಲ್ಲೆಡೆ ಹರಿದಾಡಿತ್ತು. ಜನಿಸಿದ ಗಂಡು ಶಿಶುವನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕಿ ಹಾಗೂ ಸಹಾಯಕ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರಿನಂತೆ ಶಿರಸಿ ಮೂಲದ ಸದ್ಯ ಕರ್ಕಿಯ ಮನೆಯಲ್ಲಿ ವಾಸ್ತವ್ಯ ಇರುವ ಅವಿವಾಹಿತೆಯೋರ್ವಳು ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದ್ದಳು. ಈ ವಿಷಯ ತಿಳಿದ ಅದೇ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನರ್ಸ್ ಇವರನ್ನು ಪರಿಚಯ ಮಾಡಿಕೊಂಡು ಮಗುವನ್ನು ಸಾಕಲು ಸಾಧ್ಯವಿದೆಯೆ ಎಂದು ವಿಚಾರಿಸಿ, ಅವರಿಗೆ ಮಗುವನ್ನು ಮಕ್ಕಳಿಲ್ಲದ ದಂಪತಿಗೆ ನೀಡಲು ಪ್ರೇರೇಪಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button