Follow Us On

WhatsApp Group
Important
Trending

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಳಗೆ ಬೆಂಕಿ ಅನಾಹುತ: ಮನೆಯೊಳಗಿದ್ದ ಎಲೆಕ್ಟ್ರಿಕಲ್ ಮತ್ತು ಗೃಹಬಳಕೆ ಸಾಮಗ್ರಿಗಳು ಸುಟ್ಟು ಕರಕಲು: ತಪ್ಪಿತು ಜೀವಹಾನಿ

ಕುಮಟಾ: ಪಟ್ಟಣದಲ್ಲಿ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅನಾಹುತ ಸಂಭವಿಸಿದ ಘಟನೆ ಇಂದು ನಡೆದಿದೆ. ಗುಜಿರಗಲ್ಲಿಯ ತುಳಸಿಕಟ್ಟೆಯ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಕಾಣಿಸಿಕೊoಡಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿದೆ. ಬೆಂಕಿ ಬಿದ್ದಿರುವುದನ್ನು ಗಮನಿಸಿದ ಮನೆಯವರು ಕೂಡಲೇ ಮನೆಯಿಂದ ಹೊರಬಂದಿದ್ದು, ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಆದರೆ, ಬೆಂಕಿ ರಭಸಕ್ಕೆ ಮನೆಯೊಳಗಿದ್ದ ಪ್ರಿಜ್, ಟಿ.ವಿ, ಎಲೆಕ್ಟ್ರಿಕಲ್ ಮತ್ತು ಗೃಹಬಳಕೆ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಅಪಾರ ಹಾನಿ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಗೋಪಾಲಕೃಷ್ಣ ಗಂಗೊಳ್ಳಿ ಮಾಲೀಕತ್ವದ ಮನೆಯಲ್ಲಿ ಈ ಅಗ್ನಿ ಅನಾಹುತ ಸಂಭವಿಸಿದೆ.

ವಿಸ್ಮಯ ನ್ಯೂಸ್, ಕುಮಟಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button