ಹನಿಟ್ರ್ಯಾಪ್ ಪ್ರಕರಣ: ದುಡ್ಡಿನ ಅವಶ್ಯಕತೆಗಾಗಿ ವಿದ್ಯಾವಂತ ಮಹಿಳೆಯಿಂದ ಕೃತ್ಯ ಶಂಕೆ? ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದೇನು ನೋಡಿ?

ಕಾರವಾರ: ಶಿರಸಿಯಲ್ಲಿ ಹನಿಟ್ರ್ಯಾಪ್ ಪ್ರಕರಣ ದಾಖಲಾದ 24 ಘಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಈ ನಿಟ್ಟಿನಲ್ಲಿ ತನಿಖೆ ಪ್ರಾರಂಭಗೊಂಡಿದ್ದು ಆದಷ್ಟು ಶೀಘ್ರವಾಗಿ ಆರೋಪಿಗಳಿಂದ ಸತ್ಯಾಂಶ ಬಯಲಿಗೆಳೆಯಲಾಗುವುದು ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೆಕರ್ ಹೇಳಿದರು.

ಆರೋಪಿಗಳಾದ ಅಜಿತ್ ನಾಡಿಗ, ಧನುಷ್ ಕುಮಾರ್, ಪದ್ಮಜ ಸೇರಿ ಮೂವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಆರೋಪಿತ ಮಹಿಳೆ ವಿದ್ಯಾವಂತೆಯಾಗಿದ್ದು ದುಡ್ಡಿನ ಅವಶ್ಯಕತೆಯಿಂದಾಗಿ ಈ ಕೃತ್ಯಕ್ಕೆ ಒಪ್ಪಿಕೊಂಡಿದ್ದಾಳೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಫಿರ್ಯಾದಿ ಹಾಗೂ ಪ್ರಥಮ ಆರೋಪಿ ಪರಸ್ಪರ ಪರಿಚಿತರಾಗಿದ್ದು, ಮೊದಲಿನಿಂದಲೂ ಸಂಪರ್ಕದಲ್ಲಿರುವುದು ತಿಳಿದುಬಂದಿದೆ. ನಂತರದಲ್ಲಿ ಸರ್ಕಾರಿ ಉಪನ್ಯಾಸಕ ಹುದ್ದೆ ಕೊಡಿಸುವುದಾಗಿ ಹೇಳಿ ಶಿವಮೊಗ್ಗಕ್ಕೆ ಕರೆಸಿಕೊಂಡು ಕೆಲ ನಗ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಬಿಡುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದೂರಿನ ಪ್ರಕಾರ ಮೂವರು ಆರೋಪಿಗಳನ್ನು ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version