ಕೆಡಿಪಿ ಸಭೆ: ಕೋವಿಡ್ ನಿಯಂತ್ರಣಕ್ಕೆ ಆದ್ಯತೆ

ಕಾರವಾರ: ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿನ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕೋವಿಡ್ ಮತ್ತು ಓಮಿಕ್ರಾನ್ ನಿಯಂತ್ರಣಕ್ಕಾಗಿ ಕಾರವಾರ ತಾಲೂಕಿನಾದ್ಯಂತ ಇರುವ ಶಾಲಾ-ಕಾಲೇಜುಗಳು ಹಾಗೂ ಬಾಲಕ, ಬಾಲಕೀಯರ ವಸತಿ ನಿಲಯಗಳಲ್ಲಿನ ಸ್ವಚ್ಛತೆ, ಸ್ಯಾನಿಟೈಸರ್, ಕಡ್ಡಾಯ ಮಾಸ್ಕ್ ಧಾರಣೆಗೆ ಹೆಚ್ಚಿನ ಆದ್ಯತೆ ನೀಡಲು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸೋಮಶೇಖರ್ ಮೆಸ್ತ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಕೃಷಿ,
ಶಿಕ್ಷಣ, ತೋಟಗಾರಿಕೆ, ಅರಣ್ಯ, ಪಿಆರ್‌ಇಡಿ, ಅಕ್ಷರ ದಾಸೋಹ, ಮೀನುಗಾರಿಕೆ, ಬಂದರು, ರೇಷ್ಮೆ, ಸಮಾಜ ಕಲ್ಯಾಣ, ಸಣ್ಣ ನೀರಾವರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲ ಅನುಷ್ಠಾನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ವಿಸ್ಮಯ ನ್ಯೂಸ್, ಕಾರವಾರ

Exit mobile version