Important
Trending

ಹಿಜಾಬ್ ಕೇಸರಿ ಶಾಲು ವಿವಾದ: ಪ್ರೌಢಶಾಲೆ, ಕಾಲೇಜುಗಳಿಗೆ ಮೂರುದಿನ ರಜೆ ಘೋಷಣೆ

ಹಿಜಾಬ್ ಕೇಸರಿ ಶಾಲು ವಿವಾದ ಜೋರಾದ ಬೆನ್ನಲ್ಲೆ, ರಾಜ್ಯಾದ್ಯಂತ ನಾಳೆಯಿಂದ ಮೂರು ದಿನಗಳ ಕಾಲ ಪ್ರೌಢಶಾಲೆ,, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೂರು ದಿನಗಳ ಕಾಲ ಪ್ರೌಢಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ. ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button