ಶಿರಸಿ: ಮಹಿಳೆಯೊಬ್ಬಳು ತನ್ನ ಮಕ್ಕಳ ದೌರ್ಬಲ್ಯವನ್ನು ಮನಸ್ಸಿಗೆ ಹಚ್ಚಿಕೊಂಡು ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಬಂಡಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಡಗಿಗದ್ದೆ ನಿವಾಸಿ ಗೋದಾವರಿ ನಾಗುಗೌಡ (55) ಮೃತಪಟ್ಟವರು. ತನಗಿರುವ ಎರಡು ಜನ ಗಂಡು ಮಕ್ಕಳ ಪೈಕಿ ಓರ್ವನ ಎರಡೂ ಮಕ್ಕಳು ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದಾರೆ. ಇನ್ನೊಬ್ಬ ಮಗ ಕುಡಿತದ ಚಟ ಮೈಗೂಡಿಸಿಕೊಂಡಿದ್ದಾನೆ ಎನ್ನಲಾಗಿದೆ.
ಇದೇ ಕಾರಣಕ್ಕೆ ಮಹಿಳೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಹತ್ತಿರವಿರುವ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾಳೆ. ಮೃತರ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.