ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಂದ ಪತಿ : ಬಳಿಕ ಪೊಲೀಸರಿಗೆ ಶರಣು

ಹಳಿಯಾಳ: ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ ಘಟನೆ ತಾಲೂಕಿನ ಯಡೋಗಾ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅರ್ಪಣಾ ರಾಜಕುಮಾರ ಕುಂದೇಕರ (22) ಕೊಲೆಯಾದ ಗೃಹಿಣಿ. ಪತಿ ರಾಜಕುಮಾರ ಕುಂದೇಕರ ಆರೋಪಿಯಾಗಿದೆ.

ಆರೋಪಿ ಅರ್ಪಣಾಳನ್ನು 5 ವರ್ಷಗಳ ಹಿಂದೆ ಮದುವೆಯಾಗಿದ್ದ. ಇವರಿಗೆ 3 ವರ್ಷದ ಗಂಡು ಹಾಗೂ 8 ತಿಂಗಳ ಹೆಣ್ಣು ಮಗುವಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆ ಮಾಡಿದ ಆರೋಪಿ ಹಳಿಯಾಳ ಪೊಲೀಸ್ ಠಾಣೆಗೆ ಬಂದು ರಾಜಕುಮಾರ ಶರಣಾಗಿದ್ದಾನೆ. ಸಿಪಿಐ ರಂಗನಾಥ ನೀಲಮ್ಮನವರ, ಪಿಎಸ್‌ಐ ಶಿವಾನಂದ ನಾವದಗಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version