Follow Us On

WhatsApp Group
Important
Trending

ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಆತ್ಮಹತ್ಯೆ: ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣು

ಭಟ್ಕಳ: ತಾಲೂಕಿನ ಕೋಣಾರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವಕನನ್ನು ಮಂಜುನಾಥ ಸೋಮಯ್ಯ ಗೊಂಡ (29) ಎಂದು ಗುರುತಿಸಲಾಗಿದೆ. ಈತನು ತಮ್ಮ ಊರಿನಲ್ಲಿಯೇ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.

ತಮ್ಮ ಮನೆಯ ಹತ್ತಿರದಲ್ಲಿಯೇ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button