ಕುಮಟಾ: ಆಟಿಕೆ ಸಾಮಗ್ರಿಗಳನ್ನು ಖರೀದಿಸಲು ಹೋದ ಗ್ರಾಹಕನಿಗೆ ರಾಜಸ್ಥಾನಿ ವ್ಯಾಪಾರಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದೆ. ಕುಮಟಾ ಜಾತ್ರೆಯಲ್ಲಿ ಆಟಿಗೆ ಸಾಮಗ್ರಿಗಳನ್ನು ಮಾರಾಟ ಮಾಡಲು ಬಂದ ರಾಜಸ್ತಾನಿ ವ್ಯಾಪಾರಸ್ಥರು ಆಗಮಿಸಿದ್ದಾರೆ. ಈ ವೇಳೆ ಹೊಸ ಬಸ್ ನಿಲ್ದಾಣದಲ್ಲಿರುವಾಗ ಆಟಿಗೆ ಸಾಮಗ್ರಿಗಳನ್ನು ಕೊಳ್ಳಲು ಮಹಿಳಾ ವ್ಯಾಪಾರಿ ಬಳಿ ತಾಲೂಕಿನ ಸಂತೆಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೂರುಮಠ ವ್ಯಕ್ತಿಯೋರ್ವ ತೆರಳಿದ್ದಾನೆ.
ಆಟಿಕೆ ಸಾಮಾನು ಖರೀದಿ ಮಾಡುವ ಸಂದರ್ಭದಲ್ಲಿ ಮಹಿಳಾ ವ್ಯಾಪಾರಿ ಮತ್ತು ಈತನ ನಡುವೆ ಕೆಲ ಮಾತು ಬೆಳೆದಿದೆ. ಇದನ್ನೆ ತಪ್ಪಾಗಿ ಅರ್ಥೈಸಿಕೊಂಡ ಮಹಿಳಾ ವ್ಯಾಪಾರಿ ಕಡೆಯ ಪುರುಷರು ಈತನ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದಾಗಿ ವ್ಯಕ್ತಿಯ ಮೂಗಲ್ಲಿ, ಬಾಯಲ್ಲಿ ರಕ್ತ ಸೋರುತ್ತಿತ್ತು. ಅಲ್ಲಿಯೇ ಹತ್ತಿರದಲ್ಲಿದ್ದ ಸಾರಿಗೆ ನೌಕರರು ಮತ್ತು ಪೊಲೀಸರು ಜಗಳ ಹಲ್ಲೆಗೊಳಗಾದ ವ್ಯಕ್ತಿಯನ್ನು ವ್ಯಾಪಾರಿಗಳಿಂದ ರಕ್ಷಿಸಿ, ಸರ್ಕಾರಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಚಿಕಿತ್ಸೆ ಕೊಡಿಸಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.