ವಿವಾಹಿತ ಮಹಿಳೆಯ ಅರೆನಗ್ನ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್: ಮಹಿಳೆ ಹೇಳಿದ್ದೇನು ನೋಡಿ?

ಕಾರವಾರ: ವಿವಾಹಿತ ಮಹಿಳೆಯೊಬ್ಬಳ ಜೊತೆ ಸ್ನೇಹ ಬೆಳಸಿ ಅರೆನಗ್ನ ವಿಡಿಯೋವನ್ನ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನ ಮೇಲೆ ನಗರದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದಾಶಿವಗಡ ಮೂಲಕ ವ್ಯಕ್ತಿಯೋರ್ವ ವಿದೇಶದಲ್ಲಿದ್ದು ಸಾಮಾಜಿಕ ಜಾಲತಾಣದ ಮೂಲಕ ವಿವಾಹಿತ ಮಹಿಳೆಯ ಸ್ನೇಹವನ್ನ ಮಾಡಿಕೊಂಡಿದ್ದ ಎನ್ನಲಾಗಿದೆ.

ಇನ್ನು ವಿಡಿಯೋ ಕರೆ ಮಾಡುವ ಮಟ್ಟಿಗೆ ಸ್ನೇಹ ಬೆಳೆದಿದ್ದು ವಿಡಿಯೋ ಕರೆ ಮಾಡುವಾಗ ಅರೆನಗ್ನ ವಿಡಯೋವನ್ನ ರೆಕಾರ್ಡ್ ಮಾಡಿಕೊಂಡಿದ್ದನು. ಕೆಲ ದಿನದ ಹಿಂದೆ ಮಹಿಳೆಯ ಸಂಭoದಿಯ ಫೇಸ್ ಬುಕ್ ಅಕೌಂಟ್ ನಲ್ಲಿ ಮಹಿಳೆಯ ಅರೆನಗ್ನ ವಿಡಿಯೋವನ್ನ ಟ್ಯಾಗ್ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದು ನ್ಯಾಯ ಕೊಡಿಸುವಂತೆ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರನ್ನ ನೀಡಿದ್ದಾಳೆ. ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version