ಭೀಕರ ಅಪಘಾತ: ಡಿವೈಡರ್ ಗೆ ಡಿಕ್ಕಿ ಹೊಡೆದ ವಾಹನ: ಮಹಿಳೆ ಸ್ಥಳದಲ್ಲೇ ಸಾವು

ಹೊನ್ನಾವರ: ತಾಲ್ಲೂಕಿನ ಕಾಸರಕೋಡ ರೋಷನ್ ಮೊಹಲ್ಲಾದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿ ಹೋಡೆದ ಪರಿಣಾಮ ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವೀಗಿಡಾದ ಘಟನೆ ವರದಿಯಾಗಿದೆ.

ಬುಲೇರೋ ಜಿಪ್ಸಿ ವಾಹನ ಕಾಸರಕೋಡ ರೊಷನಮುಲ್ಲಾ ಸಮೀಪ ಡಿವೈಡರಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದು ವಾಹನದಲ್ಲಿ ಇರುವ ಎಲ್ಲರಿಗೂ ಗಂಭೀರ ಪೆಟ್ಟಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಮೂರು ಜನ ಮಹಿಳೆಯರು, ಚಾಲಕ, 3 ಜನ ಪುರುಷರು ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಉಳಿದವರಿಗೂ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿದ್ದಾರೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version