ರಾಮಲಿಂಗೇಶ್ವರ ದೇವರ ಪ್ರತಿಷ್ಠಾಪನೆ ಕಾರ್ಯ ನೆರವೇರಿಸಿದ ಸ್ವರ್ಣವಲ್ಲಿ ಶ್ರೀಗಳು

ಯಲ್ಲಾಪುರ: ದೇವಸ್ಥಾನಗಳನ್ನು ನಿರ್ಮಿಸಿದ ಮಾತ್ರಕ್ಕೆ ನಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ಅಲ್ಲಿ ನಿರಂತರವಾಗಿ ಪೂಜೆ, ಧಾರ್ಮಿಕ ಕಾರ್ಯಗಳು ನಡೆಯುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಮ್ಮದು ಎಂದು ಸ್ವರ್ಣವಲ್ಲಿಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ಅವರು ತಾಲೂಕಿನ ಬಾಳೆಹದ್ದ ಸಮೀಪದ ಕಾನಗೋಡಿನಲ್ಲಿ ರಾಮಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕೋವಿಡ್ ನಂತಹ ಮಹಾಮಾರಿಗಳು ಹೆಚ್ಚಿನ ದುಷ್ಪರಿಣಾಮ ಬೀರದೇ ಇರಲು ದೈವೀಶಕ್ತಿ ಕಾರಣವಾಗಿದೆ. ದೇವತಾರಾಧನೆ, ಧಾರ್ಮಿಕ ಕಾರ್ಯಗಳು ನಿರಂತರವಾಗಿ ನಮ್ಮನ್ನು ರಕ್ಷಿಸುತ್ತವೆ ಎಂದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version