ಉತ್ತರಕನ್ನಡ ಜಿಲ್ಲೆಗೂ ಹಬ್ಬಿದ ಹಿಜಾಬ್ ಕಿಚ್ಚು: ಹಿಜಾಬ್ ಗೆ ಪಟ್ಟು ಹಿಡಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು

ಕಾರವಾರ: ಉತ್ತರಕನ್ನಡ ಜಿಲ್ಲೆಗೂ ಹಿಜಾಬ್ ವಿವಾದ ಕಾಲಿಟ್ಟಿದೆ. ಶಿರಸಿಯ ಕಾಲೇಜೊಂದರಲ್ಲಿ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದ ಘಟನೆ ಮಂಗಳವಾರ ನಡೆದಿದೆ. ಇಲ್ಲಿಯ ಎಂಇಎಸ್ ಕಾಲೇಜಿಗೆ ಹಿಜಾಬ್ ಧರಿಸಿ ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರವೇಶಿಸಲು ಮುಂದಾಗಿದ್ದು, ಹಿಜಾಬ್ ಧರಿಸಿ ತರಗತಿಗೆ ತೆರಳಲು ಪ್ರಯತ್ನಿಸಿದ್ದಾರೆ.

ಆದರೆ ಕಾಲೇಜಿನ ಆವರಣದಲ್ಲೇ ಅವರನ್ನು ಕಾಲೇಜು ಸಿಬ್ಬಂದಿ ತಡೆದಿದ್ದು, ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.ಕಾಲೇಜು ಆಡಳಿತ ಮಂಡಳಿ ಪ್ರಮುಖರು, ಪ್ರಾಂಶುಪಾಲರು ಮತ್ತು ಪೊಲೀಸ್ ಅಧಿಕಾರಿಗಳು ತಿಳುವಳಿಕೆ ನೀಡಿದರೂ ಕೇಳದ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ತೆರಳಿದಿದ್ದಾರೆ ಎಂದು ತಿಳಿದು ಬಂದಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version