ಶಿರಸಿ: ಉತ್ತರಕನ್ನಡದಲ್ಲೂ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಕಾವುಪಡೆದುಕೊಳ್ಳುತ್ತಿದೆ. ಶಿರಸಿಯಲ್ಲಿ ಇಂದೂ ಕೂಡಾ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಘೋಷಣೆ ಕೂಗುತ್ತಾ ಆಗಮಿಸಿದ ಘಟನೆ ಎಂ ಎಂ ಕಲಾ ಮತ್ತು ವಿಜ್ಞಾನ ವಿದ್ಯಾಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
25 ಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಆಗಮಿಸಿ ತರಗತಿಗೆ ಪ್ರವೇಶ ನೀಡುವಂತೆ ಒತ್ತಾಯಿಸಿದ್ದು, ಪ್ರಾಚಾರ್ಯರು ಹೈ ಕೋರ್ಟ್ ಆದೇಶದ ಪ್ರಕಾರ ಕಾಲೇಜು ನಿಗದಿಪಡಿಸಿದ ಸಮವಸ್ತ್ರದಲ್ಲಿ ಮಾತ್ರ ತರಗತಿಗೆ ಹಾಜರಾಗಬಹುದು ಎಂದು ತಿಳಿಸಿದರು. ಪ್ರಾಚಾರ್ಯರೊಂದಿಗೆ ವಿದ್ಯಾರ್ಥಿನಿಯರು ವಾದಕ್ಕಿಳಿದ ಘಟನೆ ನಡೆದಿದೆ.
ಈ ವೇಳೆ ಮಧ್ಯಪ್ರವೇಶಿದ ಶಿರಸಿ ಡಿಎಸ್‌ಪಿ ರವಿ ಡಿ ನಾಯ್ಕ ಅವರು, ಹೈ ಕೋರ್ಟ್ ಸಮವಸ್ತ್ರ ನೀತಿ ಪಾಲಿಸುವಂತೆ ಸ್ಪಷ್ಟವಾಗಿ ಆದೇಶಿಸಿದೆ ಎಂದು ಆದೇಶದ ಪ್ರತಿ ತೋರಿಸಿದರು. ಈ ವೇಳೆ ಆಗಮಿಸಿದ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್. ಹೈ ಕೋರ್ಟ್ ಆದೇಶದ ಪ್ರತಿಯನ್ನು ಓದಿ ವಿದ್ಯಾರ್ಥಿನಿಯರಿಗೆ ತಿಳಿಹೇಳಿದರು. ಆದರೂ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ತೆರಳಲು ನಿರಾಕರಿಸಿದರು. ಹೀಗಾಗಿ ವಿದ್ಯಾರ್ಥಿನಿಯರನ್ನು ಮನೆಗೆ ಕಳುಹಿಸಲಾಯಿತು.
ವಿಸ್ಮಯ ನ್ಯೂಸ್, ಶಿರಸಿ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.