Follow Us On

WhatsApp Group
Important

ಡಾಟಾ ಎಂಟ್ರಿ ಕೆಲಸ ಮಾಡುತ್ತಿದ್ದ ಆಪರೇಟರ್ ನಾಪತ್ತೆ: ಈತನ ಗುರುತು ಸಿಕ್ಕರೆ ಪೊಲೀಸರಿಗೆ ತಿಳಿಸಿ

ಕಾರವಾರ: ಜಿಲ್ಲಾ ಆಸ್ಪತ್ರೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ವೃತ್ತಿಯಲ್ಲಿದ್ದ ಸಚಿನ್ ಕಾಣಕೋಣಕರ ಎಂಬ 26 ವರ್ಷದ ಯುವಕ ಕಾಣೆಯಾಗಿದ್ದಾನೆ. ಈತ ಮಖೇರಿ ಸಾಸನವಾಡಾದ ನಿವಾಸಿಯಾಗಿದ್ದು, ಫೆ.10ರಂದು ಬೆಳಿಗ್ಗೆ 8:45ಕ್ಕೆ ಕೆಲಸಕ್ಕೆಂದು ಹೋದವನು ಆಸ್ಪತ್ರೆಗೂ ಹೋಗದೇ ಮನೆಗೂ ಹೋಗದೇ ಕಾಣೆಯಾಗಿದ್ದಾನೆ.

ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಗೋಲು ಮುಖ, , ಕಪ್ಪು ಕೂದಲು, ಸುಮಾರು 5 ಅಡಿ, 4 ಅಂಗುಲ ಎತ್ತರವಿದ್ದು, ಕೊಂಕಣಿ, ಕನ್ನಡ, ಹಿಂದಿ, ಇಂಗ್ಲೀಷ್ ಮಾತನಾಡುತ್ತಾನೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಚೆಕ್ಟ್ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿ, ತಿಳಿ ನೀಲಿ ಬಣ್ಣದ ಏರ್ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈತ ಕುರಿತು ಮಾಹಿತಿ ಸಿಕ್ಕರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್,ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button