ತಾಲೂಕಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಸಾಣಿಕಟ್ಟಾ ಹೈಸ್ಕೂಲ್ ದ್ವಿತೀಯ ಸ್ಥಾನ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾಮಂಡಳಿ ಬೆಂಗಳೂರು, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ ಉತ್ತರಕನ್ನಡ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ಪ್ರಗತಿ ವಿದ್ಯಾಲಯ ಮೂರೂರಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2022ರ ಪ್ರಯುಕ್ತ ಹಮ್ಮಿಕೊಂಡ ಕುಮಟಾ ತಾಲೂಕಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಗಿತ್ತು.

ಶ್ರೀ ಸದ್ಗುರು ನಿತ್ಯಾನಂದ ಪ್ರೌಢಶಾಲೆ ಸಾಣಿಕಟ್ಟಾದ ವಿದ್ಯಾರ್ಥಿಗಳಾದ ಮದನ ವಿಷ್ಣು ಗೌಡ ಹಾಗೂ ಆದರ್ಶ ಮಂಜುನಾಥ ನಾಯ್ಕ ಬೆಳೆಗಳ ರಕ್ಷಣೆಗಾಗಿ ಪ್ರಾಣಿ ಪಕ್ಷಿಗಳನ್ನು ಬೆದರಿಸುವ ಸಾಧನ ವಿಷಯದಲ್ಲಿ ರಚಿಸಿದ ಮಾದರಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ವಿಜ್ಞಾನ ಶಿಕ್ಷಕ ಶ್ರೀನಿವಾಸ ಬೀರಣ್ಣ ನಾಯಕರವರಿಗೆ ಸಾಣಿಕಟ್ಟಾ ಹೈಸ್ಕೂಲ್ ಆಡಳಿತ ಮಂಡಳಿಯ ಅಧ್ಯಕ್ಷರಾದ ನಾಗರಾಜ ಹಿತ್ತಲಮಕ್ಕಿ ಹಾಗೂ ಸದಸ್ಯರು, ಹೈಸ್ಕೂಲ್ ಮುಖ್ಯಾಧ್ಯಾಪಕಿ ಶಾರದಾ ಬೀರಣ್ಣ ನಾಯಕ ಹಾಗೂ ಶಿಕ್ಷಕ ವೃಂದದವರು, ಯುವಕ ಸಂಘದವರು, ಪಾಲಕ ವೃಂದವರು ಅಭಿನಂದಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

Exit mobile version