Important
Trending

ಡಿಕ್ಕಿಹೊಡೆದ ಬೈಕ್ : ರಸ್ತೆ ಬದಿಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು

ಯಲ್ಲಾಪುರ: ಬೈಕ್ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಸಂಭವಿಸಿದೆ. ಪಾಂಡುರoಗ ಗಜಾನನ ನಾಯ್ಕ (65) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಪಟ್ಟಣದ ಟಿಎಂಎಸ್ ಎದುರಿಗೆ ವಿಶ್ವನಾಥ ಗಣಪತಿ ಭಟ್ಟ ಉಪಳೇಶ್ವರ ಎಂಬಾತ ಮೋಟಾರ್ ಸೈಕಲ್ ನಲ್ಲಿ ಶಿರಸಿ ಕಡೆಯಿಂದ ಯಲ್ಲಾಪುದೆಡೆಗೆ ಚಲಾಯಿಸಿಕೊಂಡು ಬರುತ್ತಿರುವಾಗ ರಸ್ತೆ ಬದಿಗೆ ನಡೆದುಕೊಂಡು ಹೋಗುತ್ತಿರುವ ರವೀಂದ್ರನಗರದ ಪಾಂಡುರoಗ ಗಜಾನನ ನಾಯ್ಕ ಅವರಿಗೆ ಡಿಕ್ಕಿ ಹೊಡೆಸಿದ್ದಾರೆ.

ಈ ವೇಳೆ ಪಾಂಡುರoಗನಾಯ್ಕ ಅವರ ತಲೆ ಮತ್ತು ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿ, ಅವರನ್ನು ಪಟ್ಟಣದ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button