ಹಿರೇಗುತ್ತಿ ಹೈಸ್ಕೂಲ್ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಗೋಕರ್ಣ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾಮಂಡಳಿ ಬೆಂಗಳೂರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು. ಜಿಲ್ಲಾಡಳಿತ. ಜಿಲ್ಲಾ ಪಂಚಾಯತ ಉತ್ತರಕನ್ನಡ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ. ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ಪ್ರಗತಿ ವಿದ್ಯಾಲಯ ಮೂರೂರಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದಿಂದ ವಿಜ್ಞಾನ ದಿನಾಚರಣೆ 2022ರ ಪ್ರಯುಕ್ತ ಹಮ್ಮಿಕೊಂಡ ಕುಮಟಾ ತಾಲೂಕಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ವಿಜ್ಞಾನ ಶಿಕ್ಷಕ ಮಹಾದೇವ ಬೊಮ್ಮು ಗೌಡ ಇವರ ಮಾರ್ಗದರ್ಶನದಲ್ಲಿ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ವಿದ್ಯಾರ್ಥಿಗಳಾದ ವಿಜೇತ ಮಂಜುನಾಥ ಗುನಗಾ ಹಾಗೂ ಶಿವಪ್ರಸಾದ ರಾಮಚಂದ್ರ ನಾಯಕ ಇವರು ತಯಾರಿಸಿದ ಮಾದರಿ “ಕಾಲಿನಿಂದ ಒತ್ತುವ ನಲ್ಲಿ” ವಿಷಯದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರತಿವರ್ಷವೂ ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗುತ್ತಿರುವುದು ವಿಶೇಷವಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಮಹಾತ್ಮಾಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ನಾಯಕ, ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯೋಪಾಧ್ಯಾಯರಾದ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು, ಆಶ್ರಯ ಫೌಂಡೇಶನ್ ಅಧ್ಯಕ್ಷರಾದ ರಾಜೀವ ಗಾಂವಕರ, ಗ್ರಾಮ ಪಂಚಾಯತ ಅಧ್ಯಕ್ಷರಾದ ಕುಸುಮಾ ಪಡ್ತಿ, ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಶಾಂತಾ ಎನ್ ನಾಯಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನೀಲಕಂಠ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರಾದ ರಾಜು ಕೇ ಗಾಂವಕರ. ಸ್ಪಂದನ ಫೌಂಡೇಶನ್‌ನ ಎನ್. ರಾಮು ಹಿರೇಗುತ್ತಿ, ಊರನಾಗರಿಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉತ್ತರ ಕನ್ನಡ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕುಮಟಾ, ಕೇತ್ರ ಶಿಕ್ಷಣಾಧಿಕಾರಿಗಳು ಕುಮಟಾ, ಕ್ಷೇತ್ರ ಸಂಪನ್ಮೂಲಾಧಿಕಾರಿ ಕುಮಟಾ ಇವರು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭಹಾರೈಸಿದರು.

Exit mobile version