Follow Us On

WhatsApp Group
Important
Trending

ಶಿವರಾತ್ರಿ ಸಮಯದಲ್ಲೇ ಶಿವನ ಪಾದ ಸೇರಿದ:  ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು :ಅತಿವೇಗ ತಂದ ಅವಾಂತರ      

ಅಂಕೋಲಾ: ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಮೃತ  ಪಟ್ಟ ಧಾರುಣ ಘಟನೆ  ತಾಲೂಕಿನ ಹಟ್ಟಿಕೇರಿ -ಅರೆಗದ್ದೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.ಅಂಕೋಲಾ  ತಾಲೂಕಿನ ಸಕಲಬೇಣ ನಿವಾಸಿ ಸುರೇಶ ಮೋಹನ ಅಂಬಿಗ (30) ಮೃತ ದುರ್ದೈವಿಯಾಗಿದ್ದು , ಈತ ವೃತ್ತಿಯಿಂದ ಚಾಲಕನಾಗಿದ್ದ.

ಈತನು ಅಂಕೋಲಾ ಕಡೆಯಿಂದ ಕಾರವಾರ ಕಡೆಗೆ ತನ್ನ ಬೈಕನ್ನು ಅತಿ ವೇಗ ಹಾಗೂ ನಿಶ್ಕಾಳಜಿಯಿಂದ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ, ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು, ಬೈಕ್ ಸ್ಕಿಡ್ ಆಗಿ ರಸ್ತೆಯ ಡಿವೈಡರಗೆ  ಜೋರಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ತಲೆ, ಮುಖ, ಕೈ ಕಾಲುಗಳಿಗೆ ಗಂಭೀರ ಗಾಯಗೊಂಡು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಬಿದ್ದಿದ್ದ,

ಅದನ್ನು ಗಮನಿಸಿ ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಬರುತ್ತಿದ್ದ ಗೋಕರ್ಣ – ತಲಗೇರಿ ಮೂಲದ ಗಣೇಶ ಎಂಬಾಂತ ತನ್ನ ಅಂಬುಲೆನ್ಸ ವಾಹನದ ಮೂಲಕ IRB ಸಿಬ್ಬಂದಿಗಳು ಮತ್ತು ಸ್ಥಳೀಯರ ಸಹಕಾರದಲ್ಲಿ  ಗಾಯಾಳು ಬದುಕಿರಬಹುದೆಂದು ತಾಲೂಕಾ ಆಸ್ಪತ್ರೆಗೆ ಸಾಗಿಸಿದರಾದರೂ, ಆ ವೇಳೆಗಾಗಲೇ ಅಂಬಿಗನ ಪ್ರಾಣಪಕ್ಷಿ ಹಾರಿಹೋಗಿತ್ತು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೋಲೀಸರು ತನಿಖೆ ಮುಂದುವರೆಸಿದ್ದಾರೆ..         

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button