Follow Us On

WhatsApp Group
Important
Trending

ಮನೆಯವರು ಬುದ್ದಿವಾದ ಹೇಳಿದ್ದೆ ತಪ್ಪಾಯ್ತು: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಶಿರಸಿ: ಇತ್ತಿಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ಅದರಲ್ಲೂ ವಿದ್ಯಾರ್ಥಿಗಳು ಸಣ್ಣಸಣ್ಣ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗುತ್ತಿದ್ದಾರೆ. ಹೌದು, ಕಾಲೇಜು ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಭೈರುಂಬೆ ಸಮೀಪದ ದೇವರಕೆರಿಯಲ್ಲಿ ನಡೆದಿದೆ. ಪೂಜಾ ನಾಗರಾಜ ನಾಯ್ಕ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಮನೆಯವರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ವಿದ್ಯಾರ್ಥಿನಿ ಪಿ.ಯು.ಸಿ. ಓದುತ್ತಿದ್ದಳು ಎಂದು ತಿಳಿದುಬಂದಿದ್ದು, ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button