ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಯಲ್ಲಿ ಬೆಂಕಿ ಬಿದ್ದು ಕಬ್ಬಿನ ಬೆಳೆ, ಅಡಿಕೆ ತೋಟ, ಬಾಳೆ ತೋಟ ಸೇರಿದಂತೆ ನಾಲ್ಕು ಮಾವಿನ ಮರಗಳು ಬೆಂಕಿಗೆ ಆಹುತಿಯಾಗಿದ್ದು ಸುಮಾರು 2 ಲಕ್ಷ ರೂ. ಮೌಲ್ಯದ ಬೆಳೆ ಹಾನಿ ಸಂಭವಿಸಿದೆ.
ನಂದಿಕಟ್ಟಾ ಗ್ರಾಮದ ರೈತರಾದ ಮಂಜುನಾಥ ಕವಟೆ ಹಾಗೂ ಮನೋಹರ ಕವಟೆ ಅವರಿಗೆ ಸೇರಿದ ಗದ್ದೆಗಳಲ್ಲಿ ಅಗ್ನಿ ಅವಘಡ ಸಂಬವಿಸಿದೆ.
ಈ ಎರಡು ರೈತರ ಗದ್ದೆ ಹಾಗೂ ತೋಟಗಳ ಮೇಲ್ಭಾಗದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳು ಒಂದಕ್ಕೊoದು ಸ್ಪರ್ಶಿಸಿದ್ದರಿಂದ ಬೆಂಕಿ ಉದ್ಭವಿಸಿ ಗದ್ದೆ ಹಾಗೂ ತೋಟಕ್ಕೆ ಬೆಂಕಿ ಬಿದ್ದಿದೆ.
ವಿಸ್ಮಯ ನ್ಯೂಸ್, ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.