ಲಾರಿ ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ: ಚಾಲಕರಿಗೆ ಗಾಯ

ಹೊನ್ನಾವರ: ಲಾರಿ ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ವಾಹನದ ಚಾಲಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಟ್ಯಾಂಕರ್ ಚಾಲಕ ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ಹೋಗುತ್ತಿರುವಾಗ ಲಾರಿ ಚಾಲಕ ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಹೋಗುವ ಏಕಮುಖ ಸಂಚಾರ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗದೇ, ವಿರುದ್ಧ ದಿಕ್ಕಿನಲ್ಲಿ ಲಾರಿಯನ್ನು ಅತಿವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಎದುರು ಬರುತ್ತಿದ್ದ ಟ್ಯಾಂಕರ್‌ಗೆ ಗುದ್ದಿದ್ದಾನೆ ಎನ್ನಲಾಗಿದೆ,

ಅಪಘಾತದಲ್ಲಿ ಟ್ಯಾಂಕರ್ ಚಾಲಕ ಜಯದೀಪ ಗೌಡ, ಲಾರಿ ಚಾಲಕ ಶರಣಪ್ಪ ನವಲಹಳ್ಳಿ ಗಾಯಗೊಂಡಿದ್ದಾರೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವಿಸ್ಮಯ ನ್ಯೂಸ್, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version