ಮನೆಗೆ ಬಂದು ವೃದ್ದೆಯ ಮೇಲೆ‌ ದಾಳಿ‌ಮಾಡಿದ ಮಂಗ: ಕಪಿಚೇಷ್ಠೆಗೆ ಸಾರ್ವಜನಿಕರು ಕಂಗಾಲು

ಭಟ್ಕಳ: ಮನೆಯ ಹೊರಗಡೆ ಬಂದ ವೃದ್ಧೆಯೋರ್ವರ ಮೇಲೆ ಮಂಗವೊಂದು ಏಕಾಏಕಿ ದಾಳಿ ನಡೆಸಿ ಪರಾರಿಯಾ ಗಿರುವ ಘಟನೆ ತಾಲೂಕಿನ ಗುಡ್‌ಲಕ್‌ ರೋಡ್ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೀಬಿ ಅಮೀನಾ ಎಂದು ಗುರುತಿಸಲಾಗಿದೆ. ಈಕೆಯ ಕೈ ಭಾಗದಲ್ಲಿ ಮಂಗ ಕಚ್ಚಿ ಗಾಯಗೊಳಿಸಿರುವುದು ಕಂಡು ಬಂದಿದೆ.

ವೃದ್ಧಿಗೆ ಹೆಚ್ಚು ಓಡಾಡಲು ಸಾಧ್ಯವಾಗದ ಕಾರಣ ವೈದ್ಯರೇ ಮಹಿಳೆಯ ಮನೆಗೆ ತೆರಳಿ ಚಿಕಿತ್ಸೆ ನೀಡಿದ್ದಾರೆ. ಕಳೆದ 3 ತಿಂಗಳಿನಿಂದ ಮಂಗ ಗುಡ್‌ಲಕ್‌ ರೋಡ್ ಭಾಗದಲ್ಲಿ ಹುಚ್ಚಾಟ ನಡೆಸಿದೆ, ಈಗಾಗಲೇ 14 ಜನರು ಮಂಗನ ದಾಳಿಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಈಗಾಗಲೇ ಅರಣ್ಯ ಇಲಾಖೆಗೆ ತಿಳಿಸಿದ್ದರೂ ಮಂಗನನ್ನು ಓಡಿಸಲು ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ

ವಿಸ್ಮಯ ನ್ಯೂಸ್ , ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version