Focus News
Trending

112 ದೂರವಾಣಿ ಸಂಖ್ಯೆ ಕುರಿತು ಜನಜಾಗೃತಿ ಅಭಿಯಾನ

ಭಟ್ಕಳ: ನಗರದ ಶ್ರೀ ಗುರು ಸುಧೀಂದ್ರ ಮಹಾವಿದ್ಯಾಲಯದ ಘಟಕವಾದ ರೋಟರಾಕ್ಟ್ ಕ್ಲಬ್‌ನ ಸದಸ್ಯರು ಮಾನವ ಸರಪಳಿಯನ್ನು ರಚಿಸುವ ಮೂಲಕ ಹಾಗೂ ಮಹಾವಿದ್ಯಾಲಯದ ಆವರಣದಲ್ಲಿ ಭಿತ್ತಿ ಫಲಕಗಳನ್ನು ಅಳವಡಿಸುವ ಮೂಲಕ ಆಪತ್ಕಾಲೀನ ನೆರವಿನ ಸಂಖ್ಯೆಯಾದ 112 ಕುರಿತು ಜನಜಾಗೃತಿ ಮೂಡಿಸಿದರು. ಈ ಅಭಿಯಾನದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಶ್ರೀನಾಥ್ ಪೈ ಮಾತನಾಡಿ, “112 ಆಪತ್ಕಾಲದಲ್ಲಿ ನೆರವಿಗೆ ಬರುವ ದೂರವಾಣಿ ಸಂಖ್ಯೆಯಾಗಿದ್ದು, ಈ ಸಂಖ್ಯೆಗೆ ಕರೆಮಾಡುವ ಮೂಲಕ ನಾವು ತುರ್ತು ಚಿಕಿತ್ಸಾ ವಾಹನ, ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ” ಎಂದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ವಿನಾಯಕ ನಾಂiÀi್ಕ, ಕ್ಲಬ್ ಸಂಯೋಜಕ ದೇವೇಂದ್ರ ಕಿಣಿ, ರೋಟರಾಕ್ಟ್ ಅಧ್ಯಕ್ಷ ಪ್ರೇಮಾನಂದ ನಾಯ್ಕ್, ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಭಟ್ಕಳ

Back to top button