Follow Us On

WhatsApp Group
Focus News

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸೈಕಲ್ ಜಾಥಾ

ಕಾರವಾರ: ಮಾರ್ಚ್ 08ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ರವಿವಾರ ನಗರದಲ್ಲಿ ಮಹಿಳಾ ಸಮಾನತೆಯ ಪರಿಕಲ್ಪನೆಯೊಂದಿಗೆ ಕಾರವಾರ ಬೈಸಿಕಲ್ ಕ್ಲಬ್ ವತಿಯಿಂದ ಬೈಸಿಕಲ್ ಜಾಥಾವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ.ಎo ಮಾತನಾಡಿ ಆಧುನಿಕ ಸಮಾಜದಲ್ಲಿ ಮಹಿಳೆಯರೂ ಪುರುಷರಷ್ಟೇ ಸರಿಸಮಾನವಾಗಿ ಸಮಾಜಕ್ಕೆ ಕಾಣಿಕೆ ನೀಡುತ್ತಿದ್ದಾರೆ. ಇಂದು ಮಹಿಳೆ ಡಾಕ್ಟರ್, ಎಂಜಿನಿಯರ್, ವಿಜ್ಞಾನಿ, ಪೈಲಟ್ ಹೀಗೆ ಎಲ್ಲದರಲ್ಲೂ ಪುರುಷರಷ್ಟೇ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾರಿಶಕ್ತಿ ಇಂದು ಸಮಾಜವನ್ನು ಕಟ್ಟುವುದರಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ವಿಸ್ಮಯ ನ್ಯೂಸ್, ಕಾರವಾರ

Back to top button