ಮಾಹಿತಿ
Trending

ಅಂಕೋಲಾ ಪುರಸಭೆಯಲ್ಲಿ ವಿಶ್ವ ಮಲೇರಿಯಾ ವಿರೋಧಿ ಮಾಸಾಚರಣೆ

ಅಂಕೋಲಾ : ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಲೇರಿಯಾ ವಿರೋದಿ ಮಾಸಾಚರಣೆ ಕಾರ್ಯಕ್ರಮವನ್ನು ಸೋಮವಾರ ಅಂಕೋಲಾ ಪುರಸಭೆಯ ಸಭಾಭವನದಲ್ಲಿ ಸರಳವಾಗಿ ಆಚರಿಸಲಾಯಿತು. ಶೂನ್ಯ ಮಲೇರಿಯಾ ನನ್ನಿಂದ ಪ್ರಾರಂಭ ಎಂಬ ಧ್ಯೇಯ ವಾಕ್ಯದೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಮಲೇರಿಯಾ ವಿರುದ್ಧ ಮತ್ತು ಪ್ರಸ್ತುತ ಸಂದರ್ಭದಲ್ಲಿ ಕೋವೀಡ್-19 ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚರಿಕೆ ಕುರಿತು ಜಾಗೃತಿ ಮೂಡಿಸಿ ಕರಪತ್ರ ಹಂಚಲಾಯಿತು.
ಪುರಸಭೆಯ ಪೌರಕಾರ್ಮಿಕರು, ಗುತ್ತಿಗೆ ಆಧಾರಿತ ನೌಕರಿಗೆ ಕೈಗವಸುಗಳು, ಸೆನೆಟೈಸರ್, ಡೆಟಾಲ್ ಸೋಪ್ ಮತ್ತು ಆ್ಯಂಟಿಸೆಪ್ಟಿಕ್ ದ್ರಾವಣ ವಿತರಿಸಲಾಯಿತು.
ತಹಸೀಲ್ದಾರ ಉದಯ ಕುಂಬಾರ, ಪುರಸಭೆ ಮುಖ್ಯಾಧಿಕಾರಿ ಬಿ.ಪ್ರಹ್ಲಾದ, ಪರಿಸರ ಅಭಿಯಂತರ ಪ್ರಿಯಾಂಕ, ತಾಲೂಕಾ ಆರೋಗ್ಯಾಧಿಕಾರಿ ಡಾ.ಅರ್ಚನಾ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದು ಜಾಗೃತಿ ಸಂದೇಶ ನೀಡಿದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

[sliders_pack id=”1487″]

Back to top button