Follow Us On

WhatsApp Group
Important
Trending

ಡಿಕ್ಕಿ ಹೊಡೆದ ಅಪರಿಚಿತ ವಾಹನ: ಚಿರತೆ ಬಲಿ

ಕಾರವಾರ: ನಗರದ ಬಿಣಗಾದ ಐಟಿಐ ಕಾಲೇಜ್ ಬಳಿ ಸೋಮವಾರ ಗಂಡು ಚಿರತೆಯ ಮೃತ ದೇಹವೊಂದು ಪತ್ತೆಯಾಗಿದೆ. ಈ ಚಿರತೆ ಸುಮಾರು ನಾಲ್ಕು ವರ್ಷ ವಯಸ್ಸಿನದಾಗಿದ್ದು ರಾಷ್ಟ್ರೀಯಹೆದ್ದಾರಿ 66 ದಾಟುವಾಗ ಈ ಚಿರತೆಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದಿರಬಹುದು ಎನ್ನಲಾಗಿದೆ.

ಮುಂಜಾನೆ ಸ್ಥಳೀಯರು ಈ ಭಾಗದಲ್ಲಿ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಹುಡುಕಿದಾಗ ಸಮೀಪದಲ್ಲೇ ಚಿರತೆಯ ಮೃತದೇಹ ಪತ್ತೆಯಾಗಿದೆ. ಈ ಚಿರತೆಯು ಅಪಘಾತಕ್ಕೊಳಗಾಗಿದ್ದು ತಲೆಗೆ ಏಟು ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಭಾಗದಲ್ಲಿ ಚಿರತೆ ಓಡಾಡುತ್ತಿದ್ದು, ಸ್ಥಳೀಯರು ಆತಂಕಗೊoಡಿದ್ದರು.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button