ಪಟ್ಟಣಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ: ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ

ಕುಮಟಾ: ಪಟ್ಟಣಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ನಾಪತ್ತೆಯಾದ ಘಟನೆ ಕುಮಟಾ ತಾಲೂಕಿನ ಕೋಡ್ಕಣಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಾಶಿನಾಥ ನಾಗಪ್ಪ ವೆರ್ಣೆಕರ್ ಎಂದು ತಿಳಿದುಬಂದಿದೆ. ಬೆಳ್ಳಿ ಬಂಗಾರದ ಕೆಲಸ ಮಾಡಿಕೊಂಡಿದ್ದ ಈತ ಕುಮಟಾ ಪಟ್ಟಣಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ವಾಪಸ್ ಬಂದಿಲ್ಲ.

ಈತ ಮನೆಗೂ ಬಂದಿಲ್ಲವಾಗಿದ್ದು, ಅತ್ತ ಸಂಬoಧಿಕರ ಮನೆಗೂ ತೆರಳಿದ ಕುರಿತು ಮಾಹಿತಿ ಇಲ್ಲ. ಹೀಗಾಗಿ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈತ ಪತ್ತೆಯಾದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version