Follow Us On

WhatsApp Group
Important
Trending

ಅಶ್ಲೀಲವಾಗಿ ತೆಗೆದುಕೊಂಡಿದ್ದ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಬೆದರಿಕೆ: ದೂರು ದಾಖಲಿಸಿದ ಅಪ್ರಾಪ್ತ ಬಾಲಕಿ

ಯಲ್ಲಾಪುರ: ಅಪ್ರಾಪ್ತ ಬಾಲಕಿಯೊಂದಿಗೆ ಯುವಕನೊಬ್ಬ ಸಲುಗೆ ಬೆಳೆಸಿಕೊಂಡಿದ್ದು, ಅಶ್ಲೀಲವಾಗಿ ತೆಗೆದುಕೊಂಡಿದ್ದ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಬೆದರಿಕೆಹಾಕಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಸ್ನೇಹಿತೆಯೊಂದಿಗೆ ನಗರದಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಈ ಬಾಲಕಿಗೆ ಯಲ್ಲಾಪುರ ತಾಲೂಕಿನ ಹೊಸಳ್ಳಿಯ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ.

ಈ ವೇಳೆ ಇಬ್ಬರೂ ಖಾಸಗಿಯಾಗಿ ತೆಗೆದುಕೊಂಡಿದ್ದ ಫೊಟೊಗಳನ್ನು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಬಿಡುವುದಾಗಿ ಹೆದರಿಸುತ್ತಿದ್ದು, ಆ ಫೋಟೋವನ್ನು ಬಾಲಕಿಯ ವಾಟ್ಸಪ್‌ಗೂ ಕೂಡ ಕಳುಹಿಸಿ ಹೆದರಿಸುತ್ತಿದ್ದ ಎಂದು ಬಾಲಕಿ ತಿಳಿಸಿದ್ದಾಳೆ. ನೊಂದ ಬಾಲಕಿಯು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button